ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕರ್ನಾಟಕದ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ ಪ್ರದರ್ಶನ .

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕರ್ನಾಟಕದ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ ಪ್ರದರ್ಶನ .

ದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪೇರೇಡ್ ಹಾಗೂ ಕೆಂಪುಕೋಟೆಯ ಭಾರತ ಪರ್ವದಲ್ಲಿ ಕರ್ನಾಟಕದ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಇದು ಕರ್ನಾಟಕಕ್ಕೆ ಹೆಮ್ಮೆಯ ವಿಷಯ.ಸ್ತಬ್ಧಚಿತ್ರ ಪ್ರದರ್ಶನ ಎನ್ನುವುದು (Tableau) ಎಂಬುದು ಗಣರಾಜ್ಯೋತ್ಸವದಂತಹ ವಿಶೇಷ ಸಂದರ್ಭಗಳಲ್ಲಿ ಟ್ರಕ್‌ಗಳ ಮೇಲೆ ಪ್ರದರ್ಶಿಸಲಾಗುವ ಅಲಂಕೃತ ಮಾದರಿಗಳು. ಇವುಗಳು ಆಯಾ ರಾಜ್ಯ, ಕೇಂದ್ರಾಡಳಿತ ಪ್ರದೇಶ ಅಥವಾ ಇಲಾಖೆಯ ಸಂಸ್ಕೃತಿ, ಇತಿಹಾಸ, ಸಂಸ್ಕೃತಿ, ಸಾಧನೆ ಅಥವಾ ಅಭಿವೃದ್ಧಿಯನ್ನು ಬಿಂಬಿಸುವ ದೃಶ್ಯರೂಪಗಳಾಗಿವೆ. ಇವು ಸಾಮಾನ್ಯವಾಗಿ ಚಲಿಸುವ ವಾಹನಗಳ ಮೇಲೆ ನಿರ್ಮಿಸಲಾದ ಕಲಾತ್ಮಕ ಮಾದರಿಗಳಾಗಿದ್ದು, ದೇಶದ ವಿವಿಧತೆಯನ್ನು ಎತ್ತಿ ತೋರಿಸುತ್ತವೆ. ಭಾರತದಲ್ಲಿ ಸ್ತಬ್ಧಚಿತ್ರ ಪ್ರದರ್ಶನದ ಇತಿಹಾಸ:ಆರಂಭ: ಭಾರತವು ಗಣರಾಜ್ಯವಾದ ನಂತರ, ಅಂದರೆ 1950ರಲ್ಲಿ ಮೊದಲ ಗಣರಾಜ್ಯೋತ್ಸವ ಪರೇಡ್ ನಡೆಯಿತು. ಆದರೂ, ಸಾಂಸ್ಕೃತಿಕ ಸ್ತಬ್ಧಚಿತ್ರಗಳ ಪ್ರದರ್ಶನವು ಅಧಿಕೃತವಾಗಿ ಪ್ರಾರಂಭವಾಗಿದ್ದು 1952ರಲ್ಲಿ.ಹಿನ್ನೆಲೆ: 1950ರ ಮೊದಲ ಪರೇಡ್ ಕೇವಲ ಮಿಲಿಟರಿ ಶಕ್ತಿಯ ಪ್ರದರ್ಶನವಾಗಿತ್ತು. ಆದರೆ ರಾಷ್ಟ್ರದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಆಗಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆಶಯದಂತೆ ಸ್ತಬ್ಧಚಿತ್ರಗಳನ್ನು ಸೇರಿಸಲಾಯಿತು.ಮೊದಲ ಸ್ತಬ್ಧಚಿತ್ರಗಳು: 1952ರಲ್ಲಿ ಮಧ್ಯಪ್ರದೇಶ ರಾಜ್ಯವು ತನ್ನ ಬುಡಕಟ್ಟು ಕುಶಲಕರ್ಮಿಗಳನ್ನು ಬಿಂಬಿಸುವ ಮೂಲಕ ಮೊದಲ ಸ್ತಬ್ಧಚಿತ್ರಗಳಲ್ಲಿ ಒಂದನ್ನು ಪ್ರದರ್ಶಿಸಿತು.ಪರಿಣಾಮ: 1953ರ ನಂತರ ಈ ಸಂಪ್ರದಾಯವು ಗಣರಾಜ್ಯೋತ್ಸವದ ಅವಿಭಾಜ್ಯ ಅಂಗವಾಯಿತು. ಇಂದು ಪ್ರತಿಯೊಂದು ರಾಜ್ಯ ಮತ್ತು ಕೇಂದ್ರ ಸಚಿವಾಲಯಗಳು ತಮ್ಮ ಸಾಧನೆಗಳನ್ನು ಈ ಮೂಲಕ ಪ್ರದರ್ಶಿಸುತ್ತಿವೆ. ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕರ್ತವ್ಯ ಪಥದ ಪೇರೇಡ್‌ ಹಾಗೂ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸ್ಟಾರ್ಟ್ ಅಪ್‌ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸ್ಟಾರ್ಟ್ ಅಪ್‌ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ಸ್ತಬ್ಧಚಿತ್ರದಲ್ಲಿ ಏನಿರಲಿದೆ: ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ.ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‍ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ.ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್‍ಗಳ ಮಧ್ಯೆ ರೋಬೋಟ್‍ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ.ಕಳೆದ ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೊತ್ಸವ ಪರೇಡ್‌ನಲ್ಲಿ ಐತಿಹಾಸಿಕ ನಗರವಾದ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರ ಗಮನ ಸೆಳೆದಿತ್ತು. ಕರ್ನಾಟಕವು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸತತವಾಗಿ ಭಾಗವಹಿಸುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. 2023 ರಲ್ಲಿ ‘ನಾರಿ ಶಕ್ತಿ’ ಅಡಿಯಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿತ್ತು. 2024ರಲ್ಲಿ ‘ಮೈಸೂರು ಪೇಟ’ ಮತ್ತು ಸಾಂಸ್ಕೃತಿಕ ಪರಂಪರೆಯ ಸ್ತಬ್ಧಚಿತ್ರ ಪ್ರದರ್ಶಿಸಲಾಗಿತ್ತು.ಪ್ರಶಸ್ತಿಗಳ ಸರಮಾಲೆ2022ರಲ್ಲಿ ಇಲಾಖೆ ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲುಗೆ ದ್ವಿತೀಯ ಪ್ರಶಸ್ತಿ2015ರಲ್ಲಿ ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ2011ರಲ್ಲಿ ಬೀದರ್ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ2008ರಲ್ಲಿ ಹೊಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ದಚಿತ್ರಕ್ಕೆ ಪ್ರಥಮ ಪ್ರಶಸ್ತಿ2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ. ಈ ಸಲದ ಕರ್ನಾಟಕ ಸ್ತಬ್ದ ಚಿತ್ರಗಳ ಪ್ರದರ್ಶನಕ್ಕೆ ಪ್ರಥಮ ಬಹುಮಾನ ಬರಲಿ ಎಂದು ಶುಭಾ ಹಾರೈಸೋಣ.ವಿಶೇಷ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *