ಆಹಾರ ಇಲಾಖೆಯ ಸರ್ಕಾರಿ ಗೋದಾಮಿನಲ್ಲಿ ಸ್ವತಃ ಅಧಿಕಾರಿಗಳೇ ಖಾಸಗಿ ವ್ಯಕ್ತಿಗಳ ಜೊತೆ ಕೈಜೋಡಿಸಿ ದುಬೈಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದು ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿ: ಕರವೇ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ..

ಆಹಾರ ಇಲಾಖೆಯ ಸರ್ಕಾರಿ ಗೋದಾಮಿನಲ್ಲಿ ಸ್ವತಃ ಅಧಿಕಾರಿಗಳೇ ಖಾಸಗಿ ವ್ಯಕ್ತಿಗಳ ಜೊತೆ ಕೈಜೋಡಿಸಿ ದುಬೈಗೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದು ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿ: ಕರವೇ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ..

ಗಂಗಾವತಿ:ನಗರ ಕನಕಗಿರಿ ರಸ್ತೆಯಲ್ಲಿರುವ ಆಹಾರ ಇಲಾಖೆಯ ಗೋದಾಮಿನಲ್ಲಿ ಸ್ವತಃ ಅಧಿಕಾರಿಗಳೇ ಮುಂದೆ ನಿಂತು ಅಕ್ರಮವಾಗಿ ಖಾಸಗಿ ಸಂಸ್ಥೆಯ ಚೀಲಗಳಿಗೆ ಪಡಿತರ ಅಕ್ಕಿಯನ್ನು ತುಂಬಿ, ತೂಕ ಮಾಡಿಸಿ, ಚೀಲ ಹೊಲಿದು ಲಾರಿಗೆ ಲೋಡ್ ಮಾಡಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಖಾಸಗಿ ಸಂಸ್ಥೆಯ ಚೀಲಗಳು ಪತ್ತೆಯಾಗಿದ್ದು, ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯ ಅಕ್ಕಿ ಸರಕಾರಿ ಗೋದಾಮ್ ನಿಂದಲೇ ವಿದೇಶಕ್ಕೆ ಕಳ್ಳ ಸಾಗಣೆ ಆಗುವ ಪ್ರಕರಣ ಬೆಳಕಿಗೆ ಬಂದಿದೆ.

ಗಂಗಾವತಿಯ ಕನಕಗಿರಿ ರಸ್ತೆಯಲ್ಲಿನ ಎಪಿಎಂಸಿ ಗೋದಾಮ್ ನಲ್ಲಿ ಲಾರಿಗೆ ಅಕ್ಕಿ ಲೋಡ್ ಮಾಡುವಾಗ ಕಳ್ಳ ಸಾಗಣೆ ಪತ್ತೆಯಾಗಿದೆ. ಸರಕಾರಿ ಗೋದಾಮ್ ನಲ್ಲಿದ್ದ ಅಕ್ಕಿಯನ್ನು ‘ಲಾಲ್’ ಹೆಸರಿನ ಬ್ಯಾಡ್ ನ ಚೀಲಕ್ಕೆ ತುಂಬುತ್ತಿದ್ದ ಮಾಹಿತಿ ತಿಳಿದು ಕೆಲ ಸಂಘಟನೆ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅರಬ್ ರಾಷ್ಟ್ರಗಳ ದುಬೈ ವಿಳಾಸ ಇರುವ 25 ಕೆಜಿ ಸಾಮರ್ಥ್ಯದ ಸಾವಿರಾರು ಚೀಲದಲ್ಲಿ ಅಕ್ಕಿ ತುಂಬುತ್ತಿರುವುದು ಪತ್ತೆಯಾಗಿದೆ. ವಿಷಯ ತಿಳಿದು ಗಂಗಾವತಿ ತಹಸೀಲ್ದಾರ್ ರವಿ ಅಂಗಡಿ ಹಾಗೂ ಗಂಗಾವತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆಗೆ ತಹಸೀಲ್ದಾರ್, ಆಹಾರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ, ತಡರಾತ್ರಿ ವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಒಬ್ಬರ ಮೇಲೊಬ್ಬರು ಹೇಳಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿದೆ. ಹೇಳುವು ಈ ಹಿಂದೆ ನಗರದ ರಾಯಚೂರ ರಸ್ತೆಯ ವಿದ್ಯಾನಗರದಲ್ಲಿನ ಗೌರಿ ಶಂಕರ ರೈಸ್ ಮಿಲ್ ನಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 168 ಕ್ವಿಂಟಾಲ್ ಅಕ್ಕಿಯನ್ನು ಕಳೆದ 2022 ರಲ್ಲಿ ಅಧಿಕಾರಿಗಳು ದಾಳಿ ಮಾಡಿ, ವಶ ಪಡಿಸಿಕೊಂಡಿದ್ದರು. ವಶ ಪಡಿಸಿಕೊಂಡಿರುವ ಅಕ್ಕಿಯನ್ನು ಅಧಿ ಕಾರಿಗಳು ಸರಕಾರಿ ಗೋದಾಮಿನಲ್ಲಿ ಸಂಗ್ರಹ ಮಾಡಿ, ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿದ್ದರು. ವಿಚಾರಣೆ ವೇಳೆ ಅಧಿಕಾರಿಗಳು ಸರಿಯಾಗಿ ದಾಖಲೆ ನೀಡಿದ ಹಿನ್ನೆಲೆ ವಶ ಪಡಿಸಿಕೊಂಡಿರುವ ಅಕ್ಕಿಯನ್ನು ಆರೋಪಿಗಳಿಗೆ ವಾಪಸ್ ನೀಡಲು ಕೊಪ್ಪಳ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಹಿನ್ನೆಲೆ 2022 ರಲ್ಲಿ ಜಪ್ತಿ ಮಾಡಿದ 168 ಕ್ವಿಂಟಲ್ ಅಕ್ಕಿ ರೈಸ್ ಮಿಲ್ ನವರು ಪಾವಸ್ಸು ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಲಾರಿ ಜೊತೆಗೆ ಇದ್ದವರು ಸುಳ್ಳು ಹೇಳುತ್ತಿದ್ದಾರೆ. ಇದರಿಂದ ಗಂಗಾವತಿ ತಾಲೂಕಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಅಕ್ರಮ ಎಸಗುವಲ್ಲಿ ಸೈ ಎನಿಸಿಕೊಳ್ಳುತ್ತಿದ್ದು ಇದಕ್ಕೆ ಸಾಥ ನೀಡುತ್ತಿರುವ ಎಲ್ಲಾ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಜರುಗಿಸಬೇಕು. ಇದೇ ರೀತಿಯಾಗಿ ಬಡವರಿಗೆ ಎಂದು ಸರ್ಕಾರವು ಸರ್ಕಾರಿ ಗೋದಾಮಿ ಕಳುಹಿಸಿಕೊಡುವ ಬಡವರ ಅಕ್ಕಿಯನ್ನು ಅಕ್ರಮವಾಗಿ ದುಬೈಗೆ ಕಳ್ಳಸಾಗಾಟ ಮಾಡುತ್ತಿರುವ ಅಧಿಕಾರಿಗಳನ್ನು ಮತ್ತು ಖಾಸಗಿ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಪಂಪಣ್ಣ ನಾಯಕ ದೂರು ಸಲ್ಲಿಸಿಲ್ಲಿಸಿದ್ದಾರೆ. ಈ ಕುರಿತು ಮೇಲಾಧಿಕಾರಿಗಳು ದಕ್ಷ ಅಧಿಕಾರಿಗಳ ತಂಡವನ್ನು ರಚಿಸಿ ತಪ್ಪು ಮಾಡುತ್ತಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮವನ್ನು ಜರುಗಿಸಿ ಮತ್ತು ಖಾಸಗಿ ವ್ಯಕ್ತಿಗಳ ಮೇಲೆ ಎಫ್.ಐ.ಆರ್.ದಾಖಲಿಸಿ ಅವರನ್ನು ಶಿಕ್ಷೆಗೆ ಒಳಪಡಿಸಿ ಅಧಿಕಾರಿಗಳನ್ನು ಹುದ್ದೆಯಿಂದ ಅಮಾನತ್ತೊಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *