2025 ನೇ ಸಾಲಿನ ಹೊಯ್ಸಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಸಾಹಿತಿ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಆಯ್ಕೆ.

2025 ನೇ ಸಾಲಿನ ಹೊಯ್ಸಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಸಾಹಿತಿ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಆಯ್ಕೆ.

ಗಂಗಾವತಿ: ಮಾಣಿಕ್ಯ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯೂ ರಾಜ್ಯ ಹಾಗೂ ಹೊರ ರಾಜ್ಯಗಳ ಸಾಹಿತ್ಯಕ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಅವಿರತವಾಗಿ ಕಾರ್ಯೋನ್ಮುಖವಾಗಿ ಸಾಧನೆಗೈಯುತ್ತಿರುವ ಎಲೆಮರೆ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿಯು ವಿವಿಧ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಹೊಯ್ಸಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ಇವರನ್ನು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸದರಿ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಮಾಣಿಕ್ಯ ಪ್ರಕಾಶನ ಸಂಸ್ಥೆ ತಿಳಿಸಿದೆ.2025 ನವೆಂಬರ್ 02 ಭಾನುವಾರ ಹಾಸನದ ಸಂಸ್ಕೃತ ಭವನದಲ್ಲಿ ಹಮ್ಮಿಕೊಂಡಿರುವ ಹತ್ತನೇ ವರ್ಷದ ದಶಮಾನೋತ್ಸವ ನಿಮಿತ್ತ ಹಮ್ಮಿಕೊಳ್ಳುವ ರಾಜ್ಯಮಟ್ಟದ ಕವಿಕಾವ್ಯ ಸಂಭ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮಾಣಿಕ್ಯ ಪ್ರಕಾಶನ ಸಂಸ್ಥೆಯ ಪ್ರಕಾಶಕರು ದೀಪಾ ಉಪ್ಪಾರ. ಮತ್ತು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್ ಉಪ್ಪಾರ ಪ್ರಕಟಣೆಯ ಮುಖಾಂತರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *