ಶಾರದಾ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ಮಣ್ಣಿನ ಗಣೇಶನಿಗೆ ವಿಶೇಷ ಪೂಜೆ…

ಶಾರದಾ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ಮಣ್ಣಿನ ಗಣೇಶನಿಗೆ ವಿಶೇಷ ಪೂಜೆ…

ಗಂಗಾವತಿ : ವಿದ್ಯಾನಗರದ ಶ್ರೀ ಶಾರದಾ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ಗಣೇಶ ಹಬ್ಬವನ್ನು ವಿಕ್ರಮಣೆಯಿಂದ ಆಚರಿಸಲಾಯಿತು. ಈ ವೇಳೆ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಹಿಂದೂ ಸಾಂಪ್ರದಾಯಿಕ ಪ್ರಕಾರ ಪ್ರತಿಯೊಬ್ಬರು ಪರಿಸರ ಸ್ನೇಹ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಬೇಕು,ಪಿಒಪಿ ಗಣಪತಿಗಳನ್ನು ಪ್ರತಿಷ್ಠಾಪಿಸುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತದೆ ಎಂದು ವಸತಿ ನಿಲಯ ಆಡಳಿತ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಸತಿ ನಿಲಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *