ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಿ : ಎಸ್ ಪ್ರಸಾದ..

ಗಂಗಾವತಿ : ವಿದ್ಯಾನಗರ ಶ್ರೀ ಶಾರದಾ ವಿದ್ಯಾ ಸಂಸ್ಥೆ ಶ್ರೀ ಎಸ್ ಜಿ ವಿ ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥವಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಪ್ರಸಾದರವರು ಪಠ್ಯದ ಜೊತೆಗೆ ಕ್ರೀಡೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಸಹಕಾರಿಯಾಗುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಪ್ರಸಾದ, ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ್, ಸದಸ್ಯರಾದ ಶ್ರೀ ಸುಬ್ಬರಾವ್, ಶ್ರೀ ವೇಂಕಟೇಶ್ವರಾವ್,ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಗಳಾದಂತಹ ಶ್ರೀ ವೈ ಸುದರ್ಶನ್‌ರಾವ್ ಹಾಗೂ ಶೈಕ್ಷಣಿಕ ಪ್ರಗತಿ ಪರಿಶೀಲಕರಾದ ಶ್ರೀ ಪಂಪನಗೌಡ, ಮುಖ್ಯೋಪಾಧ್ಯಾಯರಾದ ಉದಯಶ್ರೀ, ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
