ದೇಶದ ಅಭ್ಯುದಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ : ಶಾಸಕ ಜೆ. ಎನ್. ಗಣೇಶ.

ಕಂಪ್ಲಿ : ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉದಯಿಸಿದ ಕಾಂಗ್ರೆಸ್ ಪಕ್ಷ ದೇಶದ ಒಟ್ಟಾರೆ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ’ ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಹೇಳಿದರು.ಪಟ್ಟಣದ ಶಾಸಕರ ಕಛೇರಿ ಯಲ್ಲಿ ನಡೆದ ಕಾಂಗ್ರೆಸ್‌ನ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಂತರ ಅವರು ಮಾತನಾಡಿದರು.‘ಬಡವರು, ದೀನ ದಲಿತರ ಸಬಲೀಕರಣಕ್ಕೆ ಶ್ರಮಿಸುತ್ತ ಬಂದಿದೆ. ಅಲ್ಲದೆ ರಸ್ತೆಗಳ ಅಭಿವೃದ್ಧಿ, ಉನ್ನತೀಕರಣ, ಕೃಷಿ ನೀರಾವರಿ ಮತ್ತು ವೈಜ್ಞಾನಿಕ ಕ್ಷೇತ್ರಗಳಿಗೆ ನೀಡಿದ ಮಹತ್ವವನ್ನು ದೇಶ ಗುರುತಿಸಿದೆ. ಭವಿಷ್ಯದಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ತನ್ನ ತತ್ವ ಮತ್ತು ಬದ್ಧತೆಯೊಂದಿಗೆ ಜನರ ಏಳಿಗೆಗೆ ಶ್ರಮಿಸಲಿದೆ’ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಕೆ. ಶ್ರೀನಿವಾಸ ಮಾತಾನಾಡಿ ಭಾರತದಂತೆಯೇ ಅನೇಕ ರಾಷ್ಟ್ರಗಳು ಸ್ವಾತಂತ್ರ್ಯ ಗಳಿಸಿದವು. ಆದರೆ, ಅವುಗಳಲ್ಲಿ ಕೆಲವು ವಿಫಲವಾದವು, ಇನ್ನು ಕೆಲವು ಸರ್ವಾಧಿಕಾರಿ ಆಳ್ವಿಕೆಗೆ ಒಳಪಟ್ಟವು. ಭಾರತದಲ್ಲಿ ಮಾತ್ರ ಪ್ರಜಾಪ್ರಭುತ್ವವು ಜೀವಂತವಾಗಿದೆ. ಕಾಂಗ್ರೆಸ್ಸಿನ ಮಹಾನ್ ನಾಯಕರಿಂದಾಗಿ ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಯಾವಾಗಲೂ ಭಾರತದ ಜನರ ಕಲ್ಯಾಣ, ಸಬಲೀಕರಣ ಮತ್ತು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದೆ ಎಂದರು.ಈ ಸಂದರ್ಭದಲ್ಲಿ ಭಟ್ಟ ಪ್ರಸಾದ್, ಬಿ. ಜಾಫರ್, ಷಣ್ಮುಖಪ್ಪ, ಕಡಪ ಮಾಸ್ತನ್ ವಲಿ, ವಿರೂಪಾಕ್ಷಪ್ಪ, ರೇಣುಕಪ್ಪ, ರಾಘವೇಂದ್ರಸ್ವಾಮಿ, ಸತ್ಯಪ್ಪ, ಕೃಷ್ಣ ಸೇರಿದಂತೆ ವಿವಿಧ ವಿಭಾಗಗಳ ಮುಂಚೂಣಿಯ ಪದಾಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ : ಜಲಾನಸಾಬ್ ಬಡಿಗೇರ್
