ಹರಪನಹಳ್ಳಿಯ ಉಪ ವಿಭಾಗದ ಡಿ ವೈ ಎಸ್ ಪಿ ವೆಂಕಟಪ್ಪ ನಾಯಕ ಅವರಿಗೆ ರಾಷ್ಟ್ರಪತಿಯವರ ಪದಕ ಸಮಾರಂಭ…

ಬೆಂಗಳೂರು. ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಜ್ಯಪಾಲರಾದ ಡಾ. ಥಾವರ್‌ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಾದ ಶ್ರೀ ಜಿ ಪರಮೇಶ್ವರ್ ರವರಿಂದ “ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರಧಾನ” ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಹರಪನಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಾದ ವೆಂಕಟಪ್ಪನಾಯಕ್ ಅವರಿಗೂ ರಾಷ್ಟ್ರಪತಿಯವರ ಪದಕ ಹಾಗೂ ಕೇಂದ್ರ ಗೃಹ ಇಲಾಖೆಯಿಂದ ಕೊಡುವ Best investigation Award ನ್ನು ಪ್ರದಾನ ಮಾಡಿರುವ ಹಿನ್ನೆಲೆ ಹರಪನಹಳ್ಳಿ ಜನತೆ ಮತ್ತು ಇಲಾಖೆಯ ಸಿಬ್ಬಂದಿಗಳು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ವೆಂಕಟಪ್ಪ ನಾಯಕ ಡಿವೈಎಸ್ಪಿ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.