ಸಜ್ಜಲ ಶ್ರೀ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳಿಂದ ಸಜ್ಜಲ ಶ್ರೀ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ…

ಸಜ್ಜಲ ಶ್ರೀ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳಿಂದ ಸಜ್ಜಲ ಶ್ರೀ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಲಕ್ಷದೀಪೋತ್ಸವ ಕಾರ್ಯಕ್ರಮ…

ಗಂಗಾವತಿ: ಲಿಂಗಸ್ಕೂರು ತಾಲೂಕು ಸಜ್ಜಲಗುಡ್ಡದ ಸಜ್ಜಲ ಶ್ರೀಉಚಿತ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿ ಬಳಗದ ವತಿಯಿಂದ ನ.2ರಂದು ಉಚಿತ ಪ್ರಸಾದ ನಿಲಯದ ಅಮೃತ ಮಹೋತ್ಸವ ನಿಮಿತ್ತ ಮಾತೃ ಹೃದಯಿ ಸ್ಮರಣ ಸಂಚಿಕೆ ಲೋಕಾರ್ಪಣೆ ಹಾಗೂ ಕಾರ್ತಿಕ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಜ್ಜಲಗುಡ್ಡದ ಪ್ರಸಾದ ನಿಲಯದ ಹಳೇ ವಿದ್ಯಾರ್ಥಿ ಬಳಗದ ಸಂಸ್ಥಾಪಕ ಕಾರ್ಯದರ್ಶಿ ಎಸ್.ಬಿ. ಹಿರೇಮಠ ಹೇಳಿದರು.ಹಿರೇಜಂತಕಲ್ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉಚಿತ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು ಪಾವನ ಸಾನ್ನಿಧ್ಯ ವಹಿಸಲಿದ್ದು, ಶ್ರೀ ಮಲಯ ಶಾಂತ ಮುನಿರಾಜ ದೇಶಿ ಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗೆ ಅಧ್ಯಕ್ಷತೆ ವಹಿಸಲಿದ್ದಾರೆ.ಇದಲ್ಲದೆ ಹೂವಿನ ಹಡಗಲಿ ಗವಿಮಠದ ಡಾ| ಹಿರಿಶಾಂತವೀರ ಮಹಾಸ್ವಾಮಿಗಳು, ಸುಕ್ಷೇತ್ರ ಗುಡದೂರಿನ ನೀಲಕಂಠಾರ್ಯ ತಾತನವರು, ಸುಕ್ಷೇತ್ರ ಸಜ್ಜಲಗುಡ್ಡ ಕಂಬಳಿ ಹಾಳ ಗ್ರಾಮದ ಶ್ರೀ ದೊಡ್ಡಬಸವಾರ್ಯ ತಾತನವರು ಸೇರಿದಂತೆ ಸಾಹಿತಿಗಳಾದ ಬಿ.ಎಂ. ಹಿರೇಮಠ ಮುದ್ದೇಬಿಹಾಳ, ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಬಿಕೆ ರವಿ, ರಾಯಚೂರು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿಗಳಾದ ಶಿವಾನಂದ ಕೆಳಗಿನಮನಿ, ಬಸವರಾಜಹಂದ್ರಾಳ್ ಹಾಗೂ ಅಖಿಲ ಕರ್ನಾಟಕ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಮಿರ್ಜಾಪೂರ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ರಮೇಶ ಹಿರೇಮಠ, ಮಲ್ಲಯ್ಯಸ್ವಾಮಿ ಹಿರೇಮಠ, ಸಿದ್ದಲಿಂಗಯ್ಯಸ್ವಾಮಿ ಹಿರೇಮಠ, ಚನ್ಬಬಸಯ್ಯ ಹಿರೇಮಠ, ಗಂಗಾಧರ ಸೇರಿದಂತೆ ಇತರರು ಇದ್ದರು

Leave a Reply

Your email address will not be published. Required fields are marked *