ಸಹಕಾರ ಸಂಘದ ನೂತನ ಉಪಾಧ್ಯಕ್ಷೆ ಜಿ.ಅಯ್ಯಮ್ಮಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದ ಪತಿ ಈಶಪ್ಪ.

ಬಳ್ಳಾರಿ / ಕಂಪ್ಲಿ: ತಾಲೂಕಿನ ಸಣಾಪುರ ಗ್ರಾಮದಲ್ಲಿರುವ ತಮ್ಮ ಸ್ವಗ್ರಾಮದಲ್ಲಿ ಕಂಪ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಉಪಾಧ್ಯಕ್ಷೆ ಜಿ.ಅಯ್ಯಮ್ಮ ಇವರಿಗೆ ಪತಿ ಈಶಪ್ಪ ಇವರು ಸಿಹಿ ತಿನ್ನಿಸುವ ಮೂಲಕ ಶುಕ್ರವಾರ ಅಭಿನಂದನೆ ಸಲ್ಲಿಸಿದರು.ನಂತರ ಉಪಾಧ್ಯಕ್ಷೆ ಅಯ್ಯಮ್ಮ ಮಾತನಾಡಿ, ಪ್ರತಿಯೊಬ್ಬರ ಸಹಕಾರದಿಂದಾಗಿ ಉಪಾಧ್ಯಕ್ಷ ಸ್ಥಾನ ಲಭಿಸಿದ್ದು, ಸಿಕ್ಕ ಅವಕಾಶದಲ್ಲಿ ರೈತರಿಗೆ ಸಹಕಾರ ಸಂಘದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಸೇವೆ ಮಾಡಲಾಗುವುದು. ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ನೀರು ಬಳಕೆದಾರರ ಸಂಘದ ಅಧ್ಯಕ್ಷ ಕೆ.ಎಸ್.ದೊಡ್ಡಬಸಪ್ಪ, ಮುಖಂಡರಾದ ಶರಣಗೌಡ, ಹನುಮಂತಪ್ಪ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್
