ಗ್ರಾಮೀಣ ಪತ್ರಕರ್ತರ ಬಸ್ ಪಾಸ್ದಶಕಗಳ ಕನಸು ನನಸು: ತಗಡೂರು…

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ದಶಕಗಳ ಕನಸು ನನಸು: ತಗಡೂರು…

ಬೆಂಗಳೂರು:ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಆ ಮೂಲಕ ಮೂರು ದಶಕಗಳ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಕನಸು ನನಸಾಗಲಿದೆ. ಗ್ರಾಮೀಣ ಪತ್ರಕರ್ತರಿಗೂ ಉಚಿತವಾಗಿ ಬಸ್ ಪಾಸ್ ನೀಡಬೇಕು ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಸತತ ನಡೆಸಿದ ಹೋರಾಟದ ಲವಾಗಿ ಈ ಯೋಜನೆ ಜಾರಿಗೆ ಬರುತ್ತಿದೆ.ದಾವಣಗೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಬಸ್ ಪಾಸ್ ನೀಡಬೇಕೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳ ಮುಂದೆ ಹಕ್ಕೋತ್ತಾಯ ಮಂಡಿಸಿದ್ದರು. ವೇದಿಕೆಯಲ್ಲಿಯೇ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಿಎಂ ಮನವೊಲಿಕೆ ಮಾಡಿದರು. ಕೂಡಲೇ ಅದಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಉಚಿತ ಬಸ್ ಪಾಸ್ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಲ್ಲದೆ, ಬಜೆಟ್‌ನಲ್ಲಿಯೂ ೋಷಣೆ ಮಾಡಿದ್ದು, ಮರೆಯಲಾಗದ ಕ್ಷಣವಾಗಿತ್ತು. ಬಸ್ ಪಾಸ್ ಯೋಜನೆ ಜಾರಿಗೆ ನೀಡಲು ಮೊದಲ ಬಾರಿಗೆ ಮನಸ್ಸು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದಗಳು. ಈ ಯೋಜನೆ ಜಾರಿ ಹಿಂದೆ ತೆರೆ ಮರೆಯ ಶಕ್ತಿಯಾಗಿ ಸಂಘಟನೆ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್, ವಾರ್ತಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *