ಶ್ರೀರಾಮನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ: ಕೆಸಿ ಕುಲಕರ್ಣಿ..

ಶ್ರೀರಾಮನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ: ಕೆಸಿ ಕುಲಕರ್ಣಿ..

ಗಂಗಾವತಿ: ಶುಕ್ರವಾರದಂದು ತಾಲ್ಲೂಕಿನ ಶ್ರೀರಾಮನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ 2024-25ನೇ ಸಾಲಿನಲ್ಲಿ ಉತ್ತಮ ಅಂಕ ಪಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಗಂಗಾವತಿಯ ಟಿಎಂಎಇ ಶಿಕ್ಷಣ ಮಹಾವಿದ್ಯಾಲಯದ  ಪ್ರಾಂಶುಪಾಲರಾದ ಕೆಸಿ ಕುಲಕರ್ಣಿ ಅವರು ಉದ್ಘಾಟನೆಯನ್ನು ನೆರವೇರಿಸಿ ನಂತರ ಮಾತನಾಡಿ, ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸವೇ ಅಸ್ತ್ರ’ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು ಓದಲು ಬಂದಿದ್ದೇವೆ, ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸನ್ನು ಕಾಣಲು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಿದರು.ಈ ವೇಳೆ ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಳಗುಂದಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಿ.ಎಸ್.ಮಾಲಗೌಡರ್, ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಗೌಡ, ಡಾಕ್ಟರ್ ಕುಬೇರ್, ಉಪನ್ಯಾಸಕರಾದ ಮಂಜುನಾಥ, ಖಲೀಲ, ರಮೇಶ್ ,ಹುಲ್ಲೇಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಸುನಿತಾ ನಿರೂಪಣೆ, ಸ್ವಾಗತವನ್ನು ಮುದುಕಣ್ಣ , ಉಷಾ ವಂದನಾರ್ಪಣೆ ನೆರವೇರಿಸಿದರು.

Leave a Reply

Your email address will not be published. Required fields are marked *