ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗಂಗಾವತಿಯ ಕ್ರೀಡಾಪಟುಗಳ ಆಯ್ಕೆ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಗಂಗಾವತಿಯ ಕ್ರೀಡಾಪಟುಗಳ ಆಯ್ಕೆ..

ಗಂಗಾವತಿ :- ಇತ್ತೀಚೆಗೆ ಗಂಗಾವತಿ ತಾಲೂಕು ಒಳಾಂಗಣ ಕ್ರೀಡಾಂಗಣದಲ್ಲಿ, ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ 14 ಹಾಗೂ 17 ವರ್ಷದ ವಯೋಮಿತಿಯ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಯಿತು.

ಕ್ರೀಡಾಕೂಟದಲ್ಲಿ ಗುಡ್ ಶೇಪರ್ಡ್ ಪ್ರಾಥಮಿಕ ಶಾಲೆ ಮತ್ತು ಬೇತಲ್ ಪ್ರೌಢಶಾಲೆಯ ಕ್ರೀಡಾಪಟುಗಳು ಶ್ರೇಷ್ಠ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿಜೇತರ ವಿವರಗಳು:
17 ವರ್ಷದ ವಯೋಮಿತಿ – ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಂಡ : ಪ್ರಥಮ ಸ್ಥಾನ, 17 ವರ್ಷದ ವಯೋಮಿತಿ – ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ತಂಡ : ಪ್ರಥಮ ಸ್ಥಾನ, 14 ವರ್ಷದ ವಯೋಮಿತಿ – ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಂಡ : ಪ್ರಥಮ ಸ್ಥಾನ, 17 ವರ್ಷದ ವಯೋಮಿತಿ – ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಂಡ : ದ್ವಿತೀಯ ಸ್ಥಾನ

ವಿಜೇತರಾದ ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *