ಜೀವನದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು : ಕೊಲ್ಲಾ ಶ್ರೀದೇವಿ…

ಜೀವನದಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು : ಕೊಲ್ಲಾ ಶ್ರೀದೇವಿ…

ಕಾರಟಗಿ ರವಿನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆಯ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಪರಸ್ಪರ ಸಿಹಿ ತಿನಿಸಿದರು. ಈ ವೇಳೆ ICSE ಪ್ರಾಂಶುಪಾಲರು ಶ್ರೀದೇವಿ ಕೊಲ್ಲಾ ಮಾತನಾಡಿ ನಮ್ಮೆಲ್ಲರ ಜೀವನದಲ್ಲೂ ತಂದೆ–ತಾಯಿಗಳಂತೆ ಶಿಕ್ಷಕರ ಪಾತ್ರವು ಬಹಳ ಮಹತ್ವದ್ದು.

ಕೈಹಿಡಿದು ಅಕ್ಷರ ತಿದ್ದಿ, ಓದಿ –ಬರೆಯಲು ಕಲಿಸುವುದಷ್ಟೇ ಬದುಕಿನ ಕೌಶಲಗಳನ್ನೂ ಕಲಿಸುತ್ತಾ ಜೀವನದಲ್ಲಿ ಮುಂದೆ ಸಾಗುವಂತೆ ಮಾಡುವ ಶಿಕ್ಷಕರು ಒಂದರ್ಥದಲ್ಲಿ ನಮ್ಮ ಬದುಕನ್ನು ರೂಪಿಸುವ ಶಿಲ್ಪಿಗಳು. ಬದುಕಿನಲ್ಲಿ ನಮ್ಮನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ಮಾಡುವವರೇ ಶಿಕ್ಷಕರು. ಇಂತಹ ದೈವಸ್ವರೂಪಿ ಶಿಕ್ಷಕರಿಗೆ ಗೌರವ ಸಲ್ಲಿಸುವ ಸಲುವಾಗಿ ಒಂದು ದಿನವನ್ನು ನಿಗದಿ ಪಡಿಸಲಾಗಿದೆ, ಅದುವೇ ಶಿಕ್ಷಕರ ದಿನಾಚರಣೆ ಎಂದರು.

8ನೇ ತರಗತಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ,ಪ್ರಾಂಶುಪಾಲರು ಡಾ.ಮಹಮ್ಮದ್ ರಫೀಕ್, ಸಾಜಿದ ಬೇಗಂ, ವಸಂತ ದೇಸಾಯಿ, ಗಂಗಮ್ಮ, ಜ್ಯೋತಿ, ಸೌಮ್ಯ ಖುಷಿದ ಬಾನು,ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *