ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶ : ಜೂಗಲ್ ಮಂಜು ನಾಯಕ…

ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶ : ಜೂಗಲ್ ಮಂಜು ನಾಯಕ…

ಬಳ್ಳಾರಿ / ಕಂಪ್ಲಿ: ದೇಶದಲ್ಲಿ ಸ್ವಾತಂತ್ರ್ಯ ಹೋರಾಟ ಕಿಚ್ಚನ್ನು ಹಚ್ಚಿದ ಪ್ರಥಮ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದಿಂದ ಗುರುವಾರ ನಡೆದ ವೀರರಾಣಿ ಕಿತ್ತೂರ ಚನ್ನಮ್ಮನ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು. ಅವರು ರಾಜ ಮನೆತನದವರಾಗಿದ್ದರಿಂದ ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ ಪರಿಗಳ ಬಗ್ಗೆ ತರಬೇತಿ ಪಡೆದಿದ್ದರು. ಚನ್ನಮ್ಮ ಅವರು ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ. ಹಾಗಾಗಿ ಅವರ ಜನ್ಮ ದಿನವನ್ನು ಕಿತ್ತೂರಿನ ವಿಜಯೋತ್ಸವ ದಿನ ಎಂದು ಆಚರಿಸಲಾಗುತ್ತಿದೆ’ ಎಂದರು.ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ತಾಲೂಕು ಅಧ್ಯಕ್ಷ ಎಸ್.ಚಂದ್ರಶೇಖರಗೌಡ ಮಾತನಾಡಿ, ಚನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ. ಮಹಿಳೆಯರು ಕೂಡ ಸ್ವಾವಲಂಬಿಗಳಾಗಿ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಟ ಮಾಡುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು’ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಪಿ.ಮೂಕಯ್ಯಸ್ವಾಮಿ, ಬಿ.ವಿ.ಗೌಡ, ಕನಕಗಿರಿ ರೇಣುಕಾಗೌಡ, ಎಸ್.ಡಿ.ಬಸವರಾಜ, ಜಿ.ಅಮರೇಗೌಡ, ಪಿ.ಶರಣಪ್ಪ, ಜಿ.ಈರಣ್ಣ, ಜಿ.ಕುಮಾರಸ್ಚಾಮಿ, ಸಚ್ಚಿನ್, ಶರಣಪ್ಪ, ಕೆ.ವಿರೇಶ, ಕೆ.ಶಶಿಧರ್, ಹೆಚ್.ಶರಣ ಸೇರಿದಂತೆ ಸಿಬ್ವಂದಿ ಹಾಗೂ‌ ಸಮಾಜದವರು ಇದ್ದರು.

*ವರದಿ : ಜಿಲಾನಸಾಬ್ ಬಡಿಗೇರ್✍️✍️✍️✍️ 9741845277*

Leave a Reply

Your email address will not be published. Required fields are marked *