ಅ.26 ಚನ್ನಮ್ಮ ಜಯಂತಿ ಮತ್ತು ಪ್ರತಿಭಾ ಪುರಸ್ಕಾರಭವ್ಯ ಮೆರವಣಿಗೆ: ಯಶಸ್ವಿಗೆ ಶಿವರಾಮಗೌಡ ಕರೆ..

ಅ.26 ಚನ್ನಮ್ಮ ಜಯಂತಿ ಮತ್ತು ಪ್ರತಿಭಾ ಪುರಸ್ಕಾರಭವ್ಯ ಮೆರವಣಿಗೆ: ಯಶಸ್ವಿಗೆ ಶಿವರಾಮಗೌಡ ಕರೆ..

ಗಂಗಾವತಿ. ನಗರದಲ್ಲಿ ಅ.26 ರಂದು ವೀರಮಾತಿ ಕಿತ್ತೂರುರಾಣಿ ಚನ್ನಮ್ಮ ಜಯಂತಿ ಆಯೋಜಿಸಿದ್ದು, ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಸರ್ವರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮಾಜಿ ಸಂಸದ ಶಿವರಾಮಗೌಡ ಕೆರೆ ನೀಡಿದರು. ಈ ಕುರಿತು ಅವರು ಮಾಧ್ಯಮಗಳ ಮೂಲಕ ಮನವಿ ಮಾಡಿದ್ದು, ವೀರಶೈವ ಲಿಂಗಾಯತ್ ಪಂಚಮಸಾಲಿ ಶಿಕ್ಷಣ ಮತ್ತು ಕ್ಷೇಮಾಭಿವೃದ್ಧಿ ಸಂಘ ಹಾಗೂ ವೀರಶೈವ ಲಿಂಗಾಯತ್ ಪಂಚಮಸಾಲಿ ಸಂಘದ ತಾಲೂಕು ಘಟಕದ ಸಹಯೋಗದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ಅವರ 247ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಜಯಂತಿ ಪ್ರಯುಕ್ತ ಅ.26 ರಂದು ಬೆಳೆಗ್ಗೆ 10 ಗಂಟೆಗೆ ನಗರದ ರಾಯಚೂರು ರಸ್ತೆಯ ಚನ್ನಮ್ಮ ವೃತ್ತದಿಂದ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ಬೆಳೆಗ್ಗೆ 10 ಗಂಟೆಗೆ ನಗರದ ಶ್ರೀ ಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲೂಕಿನ ಪಂಚಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಾಲಿ, ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜ ಸೇರಿದಂತೆ ಸರ್ವ ಸಮಾಜ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮಾಜಿ ಸಂಸದರಾದ ಶಿವರಾಮಗೌಡ ಅವರು ಕೊರಿದ್ದಾರೆ.

Leave a Reply

Your email address will not be published. Required fields are marked *