ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ,,,

ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ,,,

ಗಂಗಾವತಿ ನಗರದ ಸಿಬಿಎಸ್ ಸರ್ಕಲ್ ಪ್ರದೇಶದಲ್ಲಿರುವ ಅಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನದಂದು ಹಮ್ಮಿಕೊಳ್ಳಲಾಗುತ್ತಿರುವ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಹಿರಿಯ ವಕೀಲರಾದ ಹೆಚ್, ಗಿರಿ ಗೌಡರು ಹಾಗೂ ಸೋಮನಾಥ ಪಟ್ಟಣಶೆಟ್ಟಿ ಅವರು ಚಾಲನೆ ನೀಡಿದರು, ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನದಂದು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಗಂಗಾವತಿ ನಗರ ತಾಲೂಕು ಮತ್ತು ಜಿಲ್ಲೆಯಲ್ಲಿರುವ ಭಕ್ತಾದಿಗಳು ಅನ್ನಸಂತರ್ಪಣೆ ವ್ಯವಸ್ಥೆಗೆ ಸಹಾಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು . ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿರುವ ಬಸವರಾಜ ರಾಮತ್ನಾಳ ಹಾಗೂ ಮಾತುಶ್ರೀ ಗಂಗಮ್ಮ ತಾಯಿಯವರ ಮಾರ್ಗದರ್ಶನದಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತಿದ್ದು ಹಾಗೂ ಪ್ರತಿ ಹುಣ್ಣಿಮೆಯ ದಿನದಂದು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯುತ್ತಿರುವುದು ತುಂಬಾ ಸಂತೋಷಕರವಾಗಿದ್ದು ಸರ್ವ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದು ಪುನೀತರಾಗಬೇಕು ಎಂದು ಶ್ರೀಹೆಚ್ ಗಿರೇಗೌಡರು ಹಾಗೂ ಶ್ರೀ ಸೋಮನಾಥ ಪಟ್ಟಣಶೆಟ್ಟಿ ಅವರು ಮನವಿ ಮಾಡಿದರು ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಸದಸ್ಯರುಗಳಾದ ವೀರೇಶ ವಡ್ಡರಹಟ್ಟಿ, ನಾಗರಾಜ ಮೇದಾರ್, ಅಶೋಕ ಶಾವಿ ಚೆನ್ನಪ್ಪ ಕುರುಗೋಡು ಸಿಬಿ ಎಸ್ ಅಶೋಕ ಗೌಡ ವೆಂಕಟೇಶ್ ಕಲ್ಯಾಣ ಮಂಜುನಾಥ್ ಕುರುಗೋಡು ಧರ್ಮಣ್ಣ ಪಂಪನಗೌಡ ಬಸವರಾಜ ಕುರುಗೋಡು ಹಾಗೂ ಮಲ್ಲೇಶಪ್ಪ ಹಿರೇಗೌಡರ್ ಅವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *