ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ….

ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ….

ಕೊಪ್ಪಳ ನವೆಂಬರ್ 04, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಸದಸ್ಯರಾದ ನ್ಯಾ. ಎಸ್.ಕೆ.ವಂಟಿಗೋಡಿ ಅವರು ನವೆಂಬರ್ 6 ಮತ್ತು 7 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಅವರು ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಪ್ರಕರಣ ಸಂಖ್ಯೆ: 3095/10/24/2025(ಎಫ್‌ಬಿ) ಗೆ ಸಂಬಂಧಿಸಿದಂತೆ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.ನವೆಂಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 1.30 ಕ್ಕೆ ಗಂಗಾವತಿಗೆ ತೆರಳುವರು. ಗಂಗಾವತಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನದ ಊಟದ ನಂತರ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಸ್ವಯಂ ಪ್ರೇರಿತ ದೂರು ಸಂಖ್ಯೆ: 3950/10/24/2024(ಎಫ್‌ಬಿ) ಗೆ ಸಂಬಂಧಿಸಿದಂತೆ ಗಂಗಾವತಿ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸು

Leave a Reply

Your email address will not be published. Required fields are marked *