ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸತ್ಯಶ್ರೀ ಆಯ್ಕೆ,,,,,

ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸತ್ಯಶ್ರೀ ಆಯ್ಕೆ,,,,,

ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದಲ್ಲಿರುವ ಯುವಕನು ಸಾಧನೆ ಮಾಡಬೇಕೆಂಬ ಛಲವಿದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ ಯಾವುದೇ ಸೌಲಭ್ಯಗಳಿಲ್ಲದೆ ಗ್ರಾಮೀಣ ಪರಿಸರದಲ್ಲಿ ಬೆಳೆದಿರುವ ವಿದ್ಯಾರ್ಥಿನಿಯೊಬ್ಬರು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ,,, ಹೌದು ಕೊಪ್ಪಳ ತಾಲೂಕಿನ ಹುಲಿಗಿ ಹೊಸಳ್ಳಿ ಹೊಸ ನಿಂಗಾಪುರ ಗ್ರಾಮದ ಸತ್ಯಶ್ರೀ ಆರ್ ವಿಜಯಕುಮಾರ್ ಎನ್ನುವ ಬಿಬಿಎ ವಿದ್ಯಾರ್ಥಿನಿ ಹರಪನಹಳ್ಳಿಯಲ್ಲಿ ನಡೆದ ವಿಶ್ವವಿದ್ಯಾನಿಲಯಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿ ಕೊಪ್ಪಳ ಜಿಲ್ಲೆಗೆ ಕೀರ್ತಿ ತಂದಿದ್ದಾರೆ,,,,

ಯಾವುದೇ ಕೋಚ್ ಮತ್ತು ಮ್ಯಾಟ್ ಇಲ್ಲದೆ ಅಭ್ಯಾಸ ಮಾಡುತ್ತಿರುವ ಸತ್ಯಶ್ರೀ ಆರ್ ವಿಜಯ್ ಕುಮಾರ್ ಅವರು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ, ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆ ರಾಜ್ಯಾಧ್ಯಕ್ಷರಾಗಿರುವ ಸನ್ಮಾನ್ಯ ಶ್ರೀ ಆರ್ ವಿಜಯ್ ಕುಮಾರ್ ಅಣ್ಣನವರ ಪುತ್ರಿಯಾಗಿರುವ ಸತ್ಯಶ್ರೀ ಅವರು ಹೊಸ ನಿಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕೊಪ್ಪಳದ ಬಾಲಕಿಯರ ಪ್ರೌಢಶಾಲೆ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಅಭ್ಯಾಸ ಮಾಡಿದ್ದಾರೆ ಪ್ರಸ್ತುತ ಹೊಸಪೇಟೆಯ ತಿಯೋಸಾಫಿಕಲ್ ಪದವಿ ಕಾಲೇಜಿನಲ್ಲಿ ಬಿಬಿಎ ಅಭ್ಯಾಸ ಮಾಡುತ್ತಿದ್ದು ವಿಶ್ವವಿದ್ಯಾನಿಲಯಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ಆರ್ ವಿಜಯ್ ಕುಮಾರ್ ಅಣ್ಣನವರು ಸಂತಸ ವ್ಯಕ್ತಪಡಿಸಿದ್ದಾರೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರುವ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕೊಪ್ಪಳ ಜಿಲ್ಲೆಗೆ ಕೀರ್ತಿ ತರಲಿ ಎಂದು ಆರ್ ವಿಜಯಕುಮಾರ್ ತಿಳಿಸಿದ್ದಾರೆ,,,

ಹುಲಿಗಿ ಹೊಸ ಲಿಂಗಪುರದಿಂದ ವರದಿಗಾರ @ ಪಿ ದಶರಥ ಕಿಸ್ಕಿಂದ ನ್ಯೂಸ್ ಕೊಪ್ಪಳ

Leave a Reply

Your email address will not be published. Required fields are marked *