ಕಂಪ್ಲಿ ತಾಲ್ಲೂಕಿನ ವಿವಿಧ ಸರ್ಕಾರಿ ಪ್ರಾ.ಹಾಗೂ ಪ್ರೌಡಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ : ಅನುಮತಿ ಇಲ್ಲದೆ ಗೈರಾದ ಹಾಗೂ ವಿದ್ಯಾರ್ಥಿಗಳಿಂದ ಶುಲ್ಕ ಪಡೆದ ಶಿಕ್ಷಕರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲು ಸೂಚನೆ…

ಕಂಪ್ಲಿ ತಾಲ್ಲೂಕಿನ ವಿವಿಧ ಸರ್ಕಾರಿ ಪ್ರಾ.ಹಾಗೂ ಪ್ರೌಡಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ : ಅನುಮತಿ ಇಲ್ಲದೆ ಗೈರಾದ ಹಾಗೂ ವಿದ್ಯಾರ್ಥಿಗಳಿಂದ ಶುಲ್ಕ ಪಡೆದ ಶಿಕ್ಷಕರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲು ಸೂಚನೆ…

ಕಂಪ್ಲಿ : ತಾಲ್ಲೂಕಿನ ವಿವಿಧ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶ್ರೀಧರ ಕೊಸುಂಬೆ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗ ಭೇಟಿ ನೀಡಿದ ಆಯೋಗದ ಅಧ್ಯಕ್ಷರಾದ ಶ್ರೀಧರ ಕೋಸುಂಬೆ ಆವರು ಶಾಲೆಯಲ್ಲಿ ಮುಖ್ಯ ಶಿಕ್ಷಕರ ವಿ.ಆರ್.ಮೂರ್ತಿ ಹಿರಿಯ ಅಧಿಕಾರಿಗಳ ಅನುಮತಿಯನ್ನು ಪಡೆಯದೇ ಕೇವಲ ರಜೆ ಚೀಟಿ ಬರೆದಿಟ್ಟು ಗೈರಾಗಿರುವುದು ಕಂಡು ಬಂದಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೂರಿಸಿ ಬಿಸಿಯೂಟ ನೀಡಬೇಕೆನ್ನುವ ನಿಯಮಗಳಿದ್ದರೂ ಸಹಿತ ವಿದ್ಯಾರ್ಥಿಗಳೇ ಸರತಿ ಸಾಲಿನಲ್ಲಿ ನಿಂತು ಊಟ ಹಾಕಿಸಿಕೊಳ್ಳುವುದು ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ನಲ್ಲಿಗಳಲ್ಲಿ ಮಕ್ಕಳು ನೀರು ಕುಡಿಯುವುದ ಕಂಡು ಬಂದಿದೆ. ಜೊತೆಗೆ ಆ ನೀರು ಅಷ್ಟೊಂದು ಸಮರ್ಪಕವಾಗಿಲ್ಲ. ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಆರ್.ಒ.ಪ್ಲಾಂಟ್ ಇದ್ದರೂ ಸಹಿತ ಅದನ್ನು ಬಳಕೆ ಮಾಡುತ್ತಿಲ್ಲ. ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯಲ್ಲಿ ಒಟ್ಟು 17ಮಕ್ಕಳು ನಿರಂತರವಾಗಿ ಗೈರಾಗಿದ್ದು, ಈ ಬಗ್ಗೆ ಬಿಇಒ ಹಾಗೂ ಡಿಡಿಪಿಐ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕು. ಮೆಟ್ರಿ ಗ್ರಾಮದ ಶಾಲೆಯಲ್ಲಿ ಕರೋನಾ ಸಂದರ್ಭದಲ್ಲಿ ಅಂದರೆ 2020-21ರಲ್ಲಿ ಪೌಷ್ಟಿಕ ಆಹಾರಕ್ಕಾಗಿ ನೀಡಲಾದ ಅನುದಾನವನ್ನು ಬಳಕೆ ಮಾಡದೇ ಇರುವುದು ಕಂಡು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಿಳಿಸಿಲಾಗಿದೆ.ರಾಮಸಾಗರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದ ದೂರುಗಳು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಡಿಡಿಪಿಐ ತೆಗೆದುಕೊಳ್ಳಬೇಕಾಗಿದೆ. ಆದರೆ ಶುಲ್ಕ ವಸೂಲಿ ಮಾಡಿದ ಮುಖ್ಯ ಶಿಕ್ಷಕರ ಬಗ್ಗೆ ನಿಯಮಾನುಸಾರ ಕಾನೂನು ಕ್ರಮಗಳನ್ನು ಕೈಗೊಳ್ಳದೇ ಕೇವಲ ಬೇರೆಡೆಗೆ ವರ್ಗಾಯಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. 2009 ಶಿಕ್ಷಣ ಕಾನೂನಿನಂತೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಜಾರಿಯಲ್ಲಿದ್ದು, ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿರುವುದು ಸರಿಯಲ್ಲ. ಈ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕಾದ ಬಿಇಒ ಹಾಗೂ ಡಿಡಿಪಿಐ ಅವರು ವಿಫಲರಾಗಿದ್ಸಾರೆಂದು ತಿಳಿಸಿದರು.ನಂತರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ರೀಧರ ಕೋಸುಂಬೆ ಮಾತನಾಡಿ, ಡಿಡಿಪಿಐ ಹಾಗೂ ಬಿಇಒಗಳು ಜಿಲ್ಲೆಯಲ್ಲಿ ಕರೋನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರಕ್ಕಾಗಿ ಬಿಡುಗಡೆಯಾದ ಅನುದಾನ ಬಳಕೆಯ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ವರದಿಯನ್ನು ಆಯೋಗಕ್ಕೆ ಒಂದು ವಾರದಲ್ಲಿ ಸಲ್ಲಿಸಬೇಕು. ಜೊತೆಗೆ ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ಶಾಲೆ ಗೈರಾದ ಮೆಟ್ರಿ ಶಾಲೆ ಮುಕ್ಯ ಶಿಕ್ಷಕ ಮತ್ತು ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿದ ರಾಮಸಾಗರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯ ಬಗ್ಗೆ ಕೈಗೊಂಡ ಶಿಸ್ತು ಕ್ರಮಗಳ ಬಗ್ಗೆ ಆಯೋಗಕ್ಕೆ ವರದಿಯನ್ನು ಸಲ್ಲಿಸಬೇಕು. ಇಲ್ಲದಿದ್ದರೆ ಆಯೋಗವೇ ಸ್ವಯಂ ಪ್ರೇರಿತ ದೂರು ದಾಖಲಿಕೊಳ್ಳಲಿದೆ ಎಂದರು.ಈ ಸಂದರ್ಭದಲ್ಲಿ ಡಿಡಿಪಿಒ ಶುಭದ್ರಾದೇವಿ, ತಹಶೀಲ್ದಾರ್ ಜೂಗಲ್ ಮಂಜುನಾಯಕ, ಪಿಐ ವಾಸುಕುಮಾರ್, ಕೆ.ಬಿ.,ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಚನ್ನಬಸಪ್ಪ ಪಾಟೀಲ್, ಡಿಡಿಪಿಒ ಕಾನೂನು ಪರಿಶೀಲನಾಧಿಕಾರಿ ಈಶ್ವರ ರಾವ್, ಇಸಿಒಗಳಾದ ಟಿ.ಎಂ.ಬಸವರಾಜ, ರೇವಣ್ಣ, ಕಂದಾಯಾಧಿಕಾರಿ ಜಗದೀಶ್ ಸೇರಿದಂತೆ ಇತರರು ಇದ್ದರು.ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *