ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಪುಸ್ತಕ ವಿತರಣೆ…

ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಪುಸ್ತಕ ವಿತರಣೆ…


ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ ಗುರುವಾರ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಶ್ರೀನಿವಾಸ ರೆಡ್ಡಿ ಮಾತನಾಡಿ ನಮ್ಮ ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ಮನುಷ್ಯನ ಹಕ್ಕನ್ನು ಮೂಲಭೂತ ಹಕ್ಕು ನಿಗದಿಪಡಿಸಲಾಗಿದೆ. ಈ ಪ್ರಜಾಪ್ರಭುತ್ವದಲ್ಲಿ ಎಲ್ಲಾರಿಗೂ ಸ್ವತಂತ್ರ, ಸಮಾನತೆ ಮತ್ತು ಹಕ್ಕುಗಳ ಅರಿವು ಮೂಡಿಸಲು ಮಾನವ ಹಕ್ಕುಗಳ ದಿನ ಎಂದು ಆಚರಿಸಲಾಗುತ್ತಿದೆ ಇದನ್ನು ಎಲ್ಲಾರೂ ಅರ್ಥ ಮಾಡಿ ಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸೋಣ ಎಂದರು. ನಂತರ ವಿದ್ಯಾರ್ಥಿಗಳು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾವಿಧಿ ಭೋಧಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿಯ ಸಂಚಾಲಕಿ ರಾಜ್ಮಾ .ಟಿ.ಎಂ.ಆರ್‌. ಕಾರ್ಯಕ್ರಮವನ್ನು ಆಯೋಜನೆ ಮಾಡಿದರು ನಂತರ ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕೈಪಿಡಿ ಎಂಬ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಚಂದ್ರಶೇಖರ್ ಬಿ., ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಕೆ. ಮಹೇಶ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕಲೀಲ್ ,ಗ್ರಂಥಪಾಲಕ ವೀರಭದ್ರಪ್ಪ ಜಿ, ಸಹಾಯಕ ಸಿದ್ಧರೂಢ, ಇತರ ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *