ಪಲ್ಸ್‌ ಪೋಲಿಯೋ: ಜಾಗೃತಿ ಜಾಥಾ.

ಪಲ್ಸ್‌ ಪೋಲಿಯೋ: ಜಾಗೃತಿ ಜಾಥಾ.

ಬಳ್ಳಾರಿ / ಕಂಪ್ಲಿ : ಡಿಸೆಂಬರ್ 21ರಂದು ನಡೆಯುವ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳೀಯ ಕೋಟೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.ಪಟ್ಟಣದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯ ದಲ್ಲಿ ನಡೆದ ಜಾಥಾಕ್ಕೆ ಪ್ರಾಥಮಿಕ ಅರೋಗ್ಯ ಮೇಲ್ವಿಚಾರಕರಾದ ಚೆನ್ನಬಸವರಾಜ ಜಾತಕ್ಕೆ ಚಾಲನೆ ನೀಡಿ ಮಾತನಾಡಿ ಪಟ್ಟಣವೂ ಸೇರಿದಂತೆ ಪೋಲಿಯೋ ಬೂತ್‌ಗಳನ್ನು ತೆರೆಯಲಾಗುತ್ತದೆ. 5ವರ್ಷ ಒಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಧ್ವನಿವರ್ಧಕರ ಹಾಗೂ ಫಲಕಗಳನ್ನು ಹಿಡಿದು ಘೋಷಣೆ ಕೂಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಬಡಿಗೇರ್ ಜಿಲಾನಸಾಬ್, ಆಶಾ ಕಾರ್ಯಕರ್ತೆ ಆರ್. ವಲಿಮಾ, ಅಂಗನವಾಡಿ ಕಾರ್ಯಕರ್ತೆ ಶಿವಲೀಲಾಮ್ಮ ಶಾಲಾ ಶಿಕ್ಷಕಿ ಯರಾದ ಶ್ವೇತಾ, ವರ್ಷಾ ಮಜುಮದಾರ, ಜೆ. ಅಕ್ಷತಾ, ಸುನೀತಾ, ಗೌಸಿಯಾ, ಕಾವ್ಯ, ಉಮಾ ಕೊಲ್ಕರಾ, ಕೆ. ಜಯಶ್ರೀ ಪ್ರಮುಖರಾದ ವಿಶ್ವನಾಥ, ಸುಮಂತ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *