ಬ್ಯಾಲ ವಿವಾಹ ತಡೆಗೆ ಕೈಜೋಡಿಸಿ : ತಿಪ್ಪೇಶಪ್ಪ…

ಬ್ಯಾಲ ವಿವಾಹ ತಡೆಗೆ ಕೈಜೋಡಿಸಿ : ತಿಪ್ಪೇಶಪ್ಪ.

ಕಂಪ್ಲಿ: ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಬಳ್ಳಾರಿ ರೀಡ್ಸ್ ಸಂಸ್ಥೆಯ ನಿರ್ದೇಶಕ ತಿಪ್ಪೇಶಪ್ಪ ತಿಳಿಸಿದರು. ಅವರು ಪಟ್ಟಣದ ಅತಿಥಿ ಗೃಹದಲ್ಲಿ ಭಾನುವಾರ ಮಕ್ಕಳ ರಕ್ಷಣೆಗೆ ಕಾನೂನುಗಳ ಎಂಬ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ಅನಕ್ಷರತೆ, ಬಡತನ ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣವಾಗಿದೆ. ಇಂತಹ ಬಾಲ್ಯ ವಿವಾಹ ಪಿಡುಗನ್ನು ತೊಲಗಿಸಲು ಕಠಿಬದ್ಧವಾಗಿ ನಿಲ್ಲುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಮಾನದಲ್ಲಿ ಬಾಲ ಗರ್ಭೀಣಿಯರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ವಿಷಾಧನೀಯವಾಗಿದೆ. ಕಂಪ್ಲಿ ತಾಲೂಕಿನಲ್ಲಿ ಕಳೆದ ಒಂದೆರಡು ತಿಂಗಳಲ್ಲಿ ಮೂರು ಬಾಲ್ಯ ವಿವಾಹ ಪ್ರಕರಣಗಳು ದಾಖಲಾದರೆ, ಮೂರು ಬಾಲ್ಯ ವಿವಾಹ ತಡೆಗಟ್ಟಲಾಗಿದೆ. ಆದ್ದರಿಂದ ಇನ್ನಷ್ಟು ಜಾಗೃತಿ ಅವಶ್ಯಕತೆ ಇದೆ. ಆದ್ದರಿಂದ ಮಕ್ಕಳ ರಕ್ಷಣೆಗೆ ಕಾನೂನುಗಳ ಎಂಬ ಪುಸ್ತಕವನ್ನು ಮುದ್ರಿಸಿ, ಎಲ್ಲಾ ಸರ್ಕಾರಿ ಶಾಲೆಗಳಿಗೆ ತಲುಪಿಸಿ, ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ, ಬಾಲ ಕಾರ್ಮಿಕ ತಡೆ, ಹೀಗೆ ಪುಸ್ತಕ ಪರಿಚಯಿಸಿ, ಮಕ್ಕಳಲ್ಲಿ ಜ್ಞಾನ ಮತ್ತು ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ಸದಸ್ಯ ಹೆಚ್.ಸಿ.ರಾಘವೇಂದ್ರ ಮಾತನಾಡಿದರು. ಈ ಸಂದರ್ಭದಲ್ಲಿ ರೀಡ್ಸ್ ಸಂಸ್ಥೆಯ ಸಂಯೋಜಕರಾದ ಕೆ.ಎಂ.ತಿಪ್ಪೇಸ್ವಾಮಿ, ಕರಿಸ್ವಾಮಿ, ಟಿಜಿ ಶ್ರೀಧರ್ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ

Leave a Reply

Your email address will not be published. Required fields are marked *