ರಸ್ತೆಗಳಲ್ಲಿ ತಗ್ಗು- ಗುಂಡಿಗಳದೇ ಪಾರುಪಥ್ಯ : ಅಧಿಕಾರಿಗಳ ನಿರ್ಲಕ್ಷ್ಯ

ರಸ್ತೆಗಳಲ್ಲಿ ತಗ್ಗು- ಗುಂಡಿಗಳದೇ ಪಾರುಪಥ್ಯ : ಅಧಿಕಾರಿಗಳ ನಿರ್ಲಕ್ಷ್ಯ

ಕಂಪ್ಲಿ : ಪಟ್ಟಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಪುರಸಭೆ ಅಧಿಕಾರಿಗಳು ಅವುಗಳನ್ನು ನಿರ್ಲಕ್ಷಿಸುತ್ತಿರುವಂತೆ ತೋರುತ್ತಿದೆ.ವಾಲ್ಮೀಕಿ ವೃತ್ತದ ಎಂಡಿ ಕ್ಯಾಂಪ್ ಎದುರಿನ ರಸ್ತೆ, ಭಾರತ್ ಗ್ಯಾಸ್ ಕಚೇರಿ ಎದುರು ಮತ್ತು ಕಾಳಿಕಾದೇವಿ ದೇವಸ್ಥಾನದ ಬಳಿಯಿರುವ ರಸ್ತೆಗಳಲ್ಲಿನ ಗುಂಡಿಗಳು ಪ್ರಯಾಣಿಕರಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿವೆ. ದಿನಗಳು ಕಳೆದಂತೆ ಸಮಸ್ಯೆ ಇನ್ನಷ್ಟು ಬಿಗಡಾಯಿಸುತ್ತಿದೆ.ದೇವಸ್ಥಾನದ ಬಳಿಯ ರಸ್ತೆಯಲ್ಲಿರುವ ಗುಂಡಿಗಳು ಪ್ರಯಾಣಿಕರಿಗೆ ತೀವ್ರ ತೊಂದರೆಯನ್ನುಂಟು ಮಾಡುತ್ತಿವೆ. ದಿನಗಳು ಕಳೆದರೂ ಸಂಬಂಧಿಸಿದ ಅಧಿಕಾರಿಗಳು ಮತ್ತು ಪುರಸಭೆ ಅಧಿಕಾರಿಗಳು ಈ ಸಮಸ್ಯೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಾರೆ. ಪ್ರತಿದಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ.ಪ್ರತಿದಿನ ರಸ್ತೆಯಲ್ಲಿ ಭಾರೀ ವಾಹನಗಳು ಓಡಾಡುತ್ತವೆ. ಅವುಗಳಿಂದ ಇನ್ನೂ ದೊಡ್ಡ ಗುಂಡಿಗಳು ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಹೇಳಿದರು. ಅಧಿಕಾರಿಗಳು, ಜನಪ್ರತಿನಿಧಿಗಳು ಸಾರ್ವಜನಿಕರ ಸುಗಮ ಸುರಕ್ಷಿತ ಸಂಚಾರಕ್ಕೆ ಗುಂಡಿಗಳನ್ನು ಮುಚ್ಚಬೇಕೆಂದ ಒತ್ತಾಯಿಸುತ್ತಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *