77ನೇ ಗಣರಾಜ್ಯೋತ್ಸವ ಸಂಭ್ರಮ.50 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ: ಭೀ.ಪ್ರ.ಸ ಜಿಲ್ಲಾಧ್ಯಕ್ಷ ನಾಗರಾಜ ಕಟ್ಟಿಮನಿ …

77ನೇ ಗಣರಾಜ್ಯೋತ್ಸವ ಸಂಭ್ರಮ.50 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ: ಭೀ.ಪ್ರ.ಸ ಜಿಲ್ಲಾಧ್ಯಕ್ಷ ನಾಗರಾಜ ಕಟ್ಟಿಮನಿ …

ಕಾರಟಿಗಿ: ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರದಂದು ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಭಾಗವಾಗಿ ಶಾಲೆಯ ಸುಮಾರು 50 ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು. ​ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಭೀಮ್ ಪ್ರಜಾ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಟ್ಟಿಮನಿ ಅವರು ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.ಶಿಕ್ಷಣವು ಜೀವನದ ಬೆಳಕು. ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಗಣರಾಜ್ಯೋತ್ಸವದ ಈ ಶುಭ ದಿನದಂದು ವಿದ್ಯಾರ್ಥಿಗಳ ಮುಖದಲ್ಲಿ ನಗು ಕಾಣುವುದು ಸಂತಸದ ಸಂಗತಿ ಎಂದು ಅವರು ಆಶಯ ವ್ಯಕ್ತಪಡಿಸಿದರು.ಅದೇ ರೀತಿಯಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು. ನಮ್ಮ ಸಂಘಟನೆ ಗುರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ​ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ, ಶಿಕ್ಷಕರಾದ ಸುಬ್ರಹ್ಮಣ್ಯ. ಪಲ್ಲವಿ.ನಾಗರಾಜ. ಚೈತ್ರಾ.ರಾಜೇಶ್ವರಿ ಸೇರಿದಂತೆ ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರಾದ ಗಾಯತ್ರಿ ಹರೀಶ ಕುಮಾರ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಕಳೆ ನೀಡಿದರು. ಕೊನೆಯಲ್ಲಿ ಸಿಹಿ ಹಂಚುವ ಮೂಲಕ ಗಣರಾಜ್ಯೋತ್ಸವದ ಸಂಭ್ರಮವನ್ನು ಆಚರಿಸಲಾಯಿತು.

Leave a Reply

Your email address will not be published. Required fields are marked *