ಸಂಚಾರ ನಿಯಮ ಪಾಲಿಸಿ ಜೀವ ರಕ್ಷಿಸಿ, ಪಿಎಸ್ಐ ಇಸ್ಮಾಯಿಲ್ ಕರೆ …

ಸಂಚಾರ ನಿಯಮ ಪಾಲಿಸಿ ಜೀವ ರಕ್ಷಿಸಿ, ಪಿಎಸ್ಐ ಇಸ್ಮಾಯಿಲ್ ಕರೆ …

ಗಂಗಾವತಿ. 28 ವಾಹನ ಚಲಾಯಿಸುವವರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಜೀವ ಉಳಿಸಿಕೊಳ್ಳುವ ಜೊತೆಗೆ ಇತರೆಯವರ ಜೀವ ರಕ್ಷಣೆ ಮಾಡಬೇಕು’ ಎಂದು ಗಂಗಾವತಿ ರಾಮುಲ ನರ್ಸಿಂಗ್ ಕಾಲೇಜು ವಿಧ್ಯಾರ್ಥಿಗಳಿಗೆ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಇಸ್ಮಾಯಿಲ್ ಹೇಳಿದರು.ನಗರದ ಗಂಗಾವತಿ ಪೊಲೀಸ್ ಉಪ ವಿಭಾಗ ಹಾಗೂ ನಗರ ಪೊಲೀಸ್ ಠಾಣೆ ಮಾರ್ಗದರ್ಶನದಲ್ಲಿ ಗಂಗಾವತಿ ಸಂಚಾರಿ ಪೊಲೀಸ್ ಠಾಣೆ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಸ್ತೆಯಲ್ಲಿ ನಿಂತು ತಪ್ಪು ಮಾಡುವ ವಾಹನ ಚಾಲಕರಿಗೆ ಒಮ್ಮೆಲೆ ದಂಡ ಹಾಕುವ ಬದಲು, ಮೊದಲು ರಸ್ತೆ ಸುರಕ್ಷತೆ ಬಗ್ಗೆ, ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ನಂತರವೂ ತಪ್ಪು ಮಾಡುವುದು ಮುಂದುವರಿದಲ್ಲಿ, ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ಖಚಿತ’ ಎಂದು ಎಚ್ಚರಿಸಿದರು. ಹೆಲ್ಮೆಟ್ ಧರಿಸದೇ ಇರುವುದು ಕಾನೂನು ಉಲ್ಲಂಘನೆಯಾಗುತ್ತದೆ. ಅಜಾಗರೂಕತೆಗೆ ಅವಕಾಶ ನೀಡದೆ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ’ ಎಂದು ಸಲಹೆಯನ್ನು ನೀಡಿದರು ಪ್ರತಿ ಹೆಜ್ಜೆ ಹೆಜ್ಜೆಯಲ್ಲೂ ರಸ್ತೆ ಸುರಕ್ಷತಾ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ಸಾರ್ವಜನಿಕರು ಸಂಚಾರ ನಿಯಮ ಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.ನಿಮ್ಮ ತಂದೆ ಅಥವಾ ನಿಮ್ಮ ಸಂಬಂಧಿಕರಿಗೆ ಬೈಕ್ ಓಡಿಸುವ ಮುನ್ನ ಹೆಲ್ಮೆಟ್ ಧರಿಸಲು ಮರೆಯದಿರಿ’, ‘ಮೊದಲು ಸುರಕ್ಷತೆಯ ಬಗ್ಗೆ ಯೋಚಿಸಿ ನಂತರ ಚಾಲನೆ ಮಾಡಿ’, ‘ಅಪಘಾತಗಳು ಮಾನವನ ತಪ್ಪುಗಳು’, ‘ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಎಚ್ಚರ ಇರಲಿ’ ಎಂಬ ನಾಮಫಲಕಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಬಸವರಾಜಗೌಡ,ಹಾಗೂ ಕಾಲೇಜು ಸಿಬ್ಬಂದಿಗಳು,ವಿಧ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು

Leave a Reply

Your email address will not be published. Required fields are marked *