ಬ್ರೇಕಿಂಗ್ ನ್ಯೂಸ್ | KOPPALಟ್ರಾಕ್ಟರ್‌ಗೆ ಟ್ಯಾಂಕರ್ ಲಾರಿ ಡಿಕ್ಕಿಸೇತುವೆಯಿಂದ ಕೆಳಗೆ ಉರುಳಿದ ವಾಹನಗಳು – 4 ಸಾವು, ಹಲವರಿಗೆ ಗಂಭೀರ ಗಾಯ…

ಬ್ರೇಕಿಂಗ್ ನ್ಯೂಸ್ | KOPPALಟ್ರಾಕ್ಟರ್‌ಗೆ ಟ್ಯಾಂಕರ್ ಲಾರಿ ಡಿಕ್ಕಿಸೇತುವೆಯಿಂದ ಕೆಳಗೆ ಉರುಳಿದ ವಾಹನಗಳು – 4 ಸಾವು, ಹಲವರಿಗೆ ಗಂಭೀರ ಗಾಯ…

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪ ನಡೆದಿದೆ.ಹುಲಿಗೆಮ್ಮ ದೇವಿಯ ಜಾತ್ರೆಗೆ ತೆರಳುತ್ತಿದ್ದ ಟ್ರಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಟ್ರಾಕ್ಟರ್ ಹಾಗೂ ಟ್ಯಾಂಕರ್ ಲಾರಿ ಸೇತುವೆಯಿಂದ ಕೆಳಭಾಗಕ್ಕೆ ಉರುಳಿ ಬಿದ್ದಿವೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮುನಿರಾಬಾದ್ ಡ್ಯಾಂ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.ಅಪಘಾತದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸyರು ಸಂಚಾರ ನಿಯಂತ್ರಿಸಿ ಪರಿಸ್ಥಿತಿ ಸಾಮಾನ್ಯಗೊಳಿಸಿದರು.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.VOICE OVER LINE:“ಜಾತ್ರೆಗೆ ತೆರಳುತ್ತಿದ್ದ ಭಕ್ತರ ಟ್ರಾಕ್ಟರ್‌ಗೆ ಟ್ಯಾಂಕರ್ ಡಿಕ್ಕಿ… ಸೇತುವೆಯಿಂದ ಕೆಳಗೆ ಉರುಳಿದ ಎರಡು ವಾಹನಗಳು… ನಾಲ್ವರು ಸ್ಥಳದಲ್ಲೇ ಸಾವು… ಹಲವರ ಸ್ಥಿತಿ ಗಂಭೀರ… ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಭೀಕರ ದುರಂತ…”

Leave a Reply

Your email address will not be published. Required fields are marked *