ಗಂಗಾವತಿಯಲ್ಲಿ ಅಕ್ರಮ ಗೋ ಸಾಗಾಟ ವಿರುದ್ಧ ಆಕ್ರೋಶಹಿಂದೂಪರ ಹೋರಾಟಗಾರರಿಂದ ಗೋ ರಕ್ಷಣೆ – ಕಠಿಣ ಕ್ರಮಕ್ಕೆ ಆಗ್ರಹ…

ಗಂಗಾವತಿಯಲ್ಲಿ ಅಕ್ರಮ ಗೋ ಸಾಗಾಟ ವಿರುದ್ಧ ಆಕ್ರೋಶಹಿಂದೂಪರ ಹೋರಾಟಗಾರರಿಂದ ಗೋ ರಕ್ಷಣೆ – ಕಠಿಣ ಕ್ರಮಕ್ಕೆ ಆಗ್ರಹ…

ಗಂಗಾವತಿ: ನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.ಇತ್ತೀಚೆಗೆ ಗಂಗಾವತಿ ನಗರದಲ್ಲಿ ಕಸಾಯಿ ಕಾನೆಗೆ ಸಾಗಿಸುತ್ತಿದ್ದ ಗೋಗಳನ್ನು ಹಿಂದೂಪರ ಹೋರಾಟಗಾರರು ತಡೆದು ರಕ್ಷಣೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಗಿಣಿಗೆರೆ ಗ್ರಾಮದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕಡೆಗೆ ಟಾಟಾ ಏಸ್ ವಾಹನದಲ್ಲಿ ಗೋಗಳನ್ನು ಸಾಗಿಸುತ್ತಿರುವ ಮಾಹಿತಿ ತಿಳಿದು, ಹೊಸ್ಕೆರೆ ಶ್ರೀಕಾಂತ್, ಮಧು ಸೇರಿದಂತೆ ಹಲವಾರು ಯುವಕರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ವಾಹನದಲ್ಲಿ ಹಲವಾರು ಗೋಗಳನ್ನು ಅಕ್ರಮವಾಗಿ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಯಿತು.ತಕ್ಷಣವೇ ಹೋರಾಟಗಾರರು ಗೋಗಳನ್ನು ರಕ್ಷಿಸಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ಒಪ್ಪಿಸಿ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರರು, ಗೋ ರಕ್ಷಣೆಗೆ 2020ರಲ್ಲಿ ಜಾರಿಯಾಗಿರುವ ಕಾನೂನುಗಳನ್ನು ಉಲ್ಲಂಘಿಸಿ ನಿರಂತರವಾಗಿ ಗೋ ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಿದರು. ಪ್ರತಿನಿತ್ಯವೂ ಇಂತಹ ಅಕ್ರಮ ಸಾಗಾಟ ನಡೆಯುತ್ತಿದ್ದು, ವಿಶೇಷವಾಗಿ ಬಕ್ರೀದ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೋ ಸಾಗಾಟದ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಿದರು.ಕೆಲವರು ರೈತರ ಹೆಸರನ್ನು ಬಳಸಿ ಕಾನೂನನ್ನು ತಪ್ಪಿಸುವ ಯತ್ನ ಮಾಡುತ್ತಿರುವುದು ಕಂಡುಬಂದಿದ್ದು, ಇಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋ ಸಾಗಾಟವನ್ನು ಸಂಪೂರ್ಣವಾಗಿ ತಡೆಯಲು ವಿಶೇಷ ತಪಾಸಣೆ ತಂಡಗಳನ್ನು ರಚಿಸಿ, ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.ಇತ್ತ ಗಂಗಾವತಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಾಹನದ ಮಾಲೀಕರು ಹಾಗೂ ಸಾಗಾಟದಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಕಾನೂನುಬದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಈ ಘಟನೆ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದು, ಅಕ್ರಮ ಗೋ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

Leave a Reply

Your email address will not be published. Required fields are marked *