ಚಿಕ್ಕಜಂತಕಲ್ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹನುಮಮ್ಮ ನಾಯಕ (47) ನಿಧನ…

ಚಿಕ್ಕಜಂತಕಲ್ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹನುಮಮ್ಮ ನಾಯಕ (47) ನಿಧನ…

ಚಿಕ್ಕಜಂತ ಕ ಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಹನುಮಮ್ಮ ನಾಯಕ (47) ನಿಧನ
ಗಂಗಾವತಿ | ಜುಲೈ 25: ಚಿಕ್ಕಜಂತ ಕ ಲ್ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷೆ ಹಾಗೂ ಹೊಸಳ್ಳಿ ಗ್ರಾಮದ ನಿವಾಸಿ ಹನುಮಮ್ಮ ನಾಯಕ (47) ಅವರು ಶನಿವಾರ ನಿಧನರಾದರು.
ಮೃತರು ಪತಿ ಹನುಮಂತಪ್ಪ ನಾಯಕ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗಿದ್ದ ಅವರು ಗ್ರಾಮಾಭಿವೃದ್ಧಿಗೆ ಶ್ರಮಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಶನಿವಾರ ಹೊಸಳ್ಳಿ ಗ್ರಾಮದ ರುದ್ರಭೂಮಿಯಲ್ಲಿ ಕುಟುಂಬಸ್ಥರು, ಬಂಧು-ಬಳಗ, ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ನೆರವೇರಿತು. ಅವರ ನಿಧನಕ್ಕೆ ವಿವಿಧ ಗಣ್ಯರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *