ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಫ್ರೂಟ್ ಇಸ್ಮಾಯಿಲ್…

ಕಮಲಾಪುರದಲ್ಲಿ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ನೇಮಕಗೊಂಡಿರುವ ಫ್ರೂಟ್ ಇಸ್ಮಾಯಿಲ್ ಅವರು ರೈತರ ಸಮಸ್ಯೆಗಳ ಕುರಿತು ಧ್ವನಿ ಎತ್ತುವುದಾಗಿ ತಿಳಿಸಿದ್ದಾರೆ.ಅನ್ನದಾತ ರೈತ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಫ್ರೂಟ್ ಇಸ್ಮಾಯಿಲ್, ಜಿಲ್ಲೆಯ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಘದ ವತಿಯಿಂದ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.ರೈತರಿಗೆ ಬೆಂಬಲ ಬೆಲೆ ಸಿಗದಿರುವುದು, ಬೆಳೆ ಹಾನಿಗೆ ಸಮರ್ಪಕ ಪರಿಹಾರ ದೊರೆಯದಿರುವುದು, ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.ಇದಲ್ಲದೆ, ಕೊಪ್ಪಳ ಜಿಲ್ಲೆಯಲ್ಲಿ ತಲೆ ಎತ್ತಿರುವ ವಿವಿಧ ಫ್ಯಾಕ್ಟರಿಗಳಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ,,,, ಸಮಸ್ಯೆಗಳ ವಿರುದ್ಧವೂ ಸಂಘ ನಿರಂತರವಾಗಿ ಧ್ವನಿ ಎತ್ತಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.ರೈತರ ಹಕ್ಕುಗಳ ರಕ್ಷಣೆಗಾಗಿ ಅಗತ್ಯವಿದ್ದರೆ ಹೋರಾಟದ ಹಾದಿ ಹಿಡಿಯುವುದಾಗಿ ಫ್ರೂಟ್ ಇಸ್ಮಾಯಿಲ್ ಮಾಧ್ಯಮದ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

