ಕಲ್ಯಾಣ ಸಿರಿ’ ಸಂಪಾದಕ ಮಲ್ಲಿಕಾರ್ಜುನ ಹೊಸಕೇರಾ ಅವರ ಮನೆ ಕಳ್ಳತನ; ತಡವಾಗಿ ಬೆಳಕಿಗೆ ಬಂದ ಘಟನೆ​..

ಕಲ್ಯಾಣ ಸಿರಿ’ ಸಂಪಾದಕ ಮಲ್ಲಿಕಾರ್ಜುನ ಹೊಸಕೇರಾ ಅವರ ಮನೆ ಕಳ್ಳತನ; ತಡವಾಗಿ ಬೆಳಕಿಗೆ ಬಂದ ಘಟನೆ​..

ಗಂಗಾವತಿ: ನಗರದ ಗುಂಡಮ್ಮ ಕ್ಯಾಂಪ್ ಪ್ರದೇಶದಲ್ಲಿರುವ ‘ಕಲ್ಯಾಣ ಸಿರಿ’ ಪತ್ರಿಕೆಯ ಸಂಪಾದಕರಾದ ಮಲ್ಲಿಕಾರ್ಜುನ ಹೊಸಕೇರಾ ಅವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.​ಘಟನೆಯ ವಿವರ:ಮನೆಯ ಮಾಲೀಕ ಮಲ್ಲಿಕಾರ್ಜುನ ಹೊಸಕೇರಾ ಅವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಭಾನುವಾರದಂದು ಬೆಂಗಳೂರಿಗೆ ತೆರಳಿದ್ದರು. ಚಿಕಿತ್ಸೆ ಮುಗಿಸಿಕೊಂಡು ವಾಪಸ್ ಗಂಗಾವತಿಗೆ ಬಂದು ನೋಡಿದಾಗ, ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿರುವುದು ಅವರ ಗಮನಕ್ಕೆ ಬಂದಿದೆ.​ಮನೆಯಲ್ಲಿ ಕಳ್ಳತನವಾಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ತಕ್ಷಣವೇ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ಸ್ವತಃ ಮನೆಯ ಮಾಲೀಕರಾದ ಮಲ್ಲಿಕಾರ್ಜುನ ಹೊಸಕೇರಾ ಅವರು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *