ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಹಕರಿಸಿತಾ.ಪಂ. ಇಓ ರಾಮರೆಡ್ಡಿ ಪಾಟೀಲ್ ಹೇಳಿಕೆಆನೆಗುಂದಿಯಲ್ಲಿ ಡಸ್ಟ್‌ಬಿನ್ ಮತ್ತು ಒಣ ಕಸದ ಚೀಲ ವಿತರಣೆ …

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಹಕರಿಸಿತಾ.ಪಂ. ಇಓ ರಾಮರೆಡ್ಡಿ ಪಾಟೀಲ್ ಹೇಳಿಕೆಆನೆಗುಂದಿಯಲ್ಲಿ ಡಸ್ಟ್‌ಬಿನ್ ಮತ್ತು ಒಣ ಕಸದ ಚೀಲ ವಿತರಣೆ …

*ಗಂಗಾವತಿ* : ತಾಲೂಕಿನ ಆನೆಗೊಂದಿ ಗ್ರಾಮದಲ್ಲಿ ಸ್ವಚ್ಛತೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ಜೆ. ಎಸ್. ಡಬ್ಲ್ಯೂ ಫೌಂಡೇಶನ್ ನ ಸಿ. ಎಸ್. ಆರ್ ಅನುದಾನದಡಿಯಲ್ಲಿ ಗ್ರಾಮ ಪಂಚಾಯತ್ ಮತ್ತು ಸಾಹಸ್ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಸ್ಟ್‌ಬಿನ್ ಮತ್ತು ಒಣ ಕಸದ ಚೀಲ ವಿತರಣಾ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಚಾಲನೆ ನೀಡಿದರು.ತಾಪಂ ಇಓ ರಾಮರೆಡ್ಡಿ ಪಾಟೀಲ್ ಅವರು ಮಾತನಾಡಿ, ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸುವ ಉದ್ದೇಶದಿಂದ ಡಸ್ಟ್‌ಬಿನ್‌ಗಳು ಹಾಗೂ ಒಣ ಕಸದ ಚೀಲಗಳನ್ನು ವಿತರಿಸಲಾಗಿದೆ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಸಂಗ್ರಹಿಸುವ ಮೂಲಕ ಗ್ರಾಮವನ್ನು ಸ್ವಚ್ಛವಾಗಿಡಲು ಸಹಕರಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಕಡಿವಾಳ್ , ಪಂಚಾಯಿತಿ ಕಾರ್ಯದರ್ಶಿಯಾದ ಮನೋರಮ , ದ್ವಿತೀಯ ದರ್ಜೆ ಸಹಾಯಕರಾದ ಶಬ್ಬೀರ್ , ಸಾಹಸ್ ಸಂಸ್ಥೆಯ ಸಿಬ್ಬಂದಿಗಳಾದ ಸಂಪತ್ ಕುಮಾರ್ ಮತ್ತು ಜೋಗದ ಮಂಜುನಾಥ ಹಾಗೂ ಸಂಜೀವಿನಿ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *