ವಡ್ಡರಹಟ್ಟಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ253 ಜನರಿಗೆ ತಪಾಸಣೆ, ಉಚಿತ ಔಷಧ ವಿತರಣೆ…

ವಡ್ಡರಹಟ್ಟಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ253 ಜನರಿಗೆ ತಪಾಸಣೆ, ಉಚಿತ ಔಷಧ ವಿತರಣೆ…

ಗಂಗಾವತಿ, ನ. 21: ತಾಲೂಕಿನ ಸಮೀಪದ ಮಹಾತ್ಮ ಗಾಂಧಿ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಫೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಡಾ.ಎಸ್.ವಿ. ಸವಡಿ ಆಯುರ್ವೇದಿಕ್ ಆಸ್ಪತ್ರೆ ಹಾಗೂ ವಡ್ಡರಹಟ್ಟಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶುಕ್ರವಾರದಂದು ಆಯೋಜಿಸಲಾಗಿತ್ತು.ಶಿಬಿರದಲ್ಲಿ ಒಟ್ಟು 253 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಅಗತ್ಯ ಚಿಕಿತ್ಸೆ ಪಡೆದರು. ಇದರಲ್ಲಿ 60 ಮಹಿಳಾ ರೋಗಿಗಳು, 135 ಜನರು ಕಿವಿ, ಮೂಗು ಮತ್ತು ಗಂಟಲು (ಇಎನ್‌ಟಿ) ಸಮಸ್ಯೆಗಳಿಗೆ ಹಾಗೂ 58 ಜನರು ಎಲುಬು ಮತ್ತು ಕೀಲು ನೋವಿನ ಸಮಸ್ಯೆಗಳಿಗೆ ತಪಾಸಣೆ ಹಾಗೂ ಚಿಕಿತ್ಸೆ ಪಡೆದರು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ಚಲುವಾದಿ ತಿಳಿಸಿದರು.ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ದಮ್ಮು ಸೇರಿದಂತೆ ವಿವಿಧ ಸಾಮಾನ್ಯ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಗೆ ನುರಿತ ವೈದ್ಯರು ತಪಾಸಣೆ ನಡೆಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆ ನೀಡಿದರು. ಅಲ್ಲದೆ, ರೋಗಿಗಳಿಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು.ವಡ್ಡರಹಟ್ಟಿ, ವಡ್ಡರಹಟ್ಟಿ ಕ್ಯಾಂಪ್, ಗದ್ವಾಲ್ ಕ್ಯಾಂಪ್, ರುದ್ರೇಶ್ವರ ನಗರ, ಆರಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉಚಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಈ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

Leave a Reply

Your email address will not be published. Required fields are marked *